ಮಡಿಕೇರಿ, ಏ. 24: ಮಡಿಕೇರಿ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರಕಾರಿ ಉದ್ಯೋಗಿಗಳು, ಪೊಲೀಸರು, ಪೌರಕಾರ್ಮಿಕರು ಸೇರಿದಂತೆ ಆರೋಗ್ಯ ಕಾರ್ಯಕರ್ತರಿಗೆ ಅಪರಾಹ್ನ ಊಟದ ವ್ಯವಸ್ಥೆ ಕಲ್ಪಿಸುತ್ತಿರುವ ಮಡಿಕೇರಿ ಕೊಡವ ಸಮಾಜಕ್ಕೆ ಇಂದು ಶಾಸಕ ಕೆ.ಜಿ.ಬೋಪಯ್ಯ ಹಾಗೂ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರತ್ಯೇಕವಾಗಿ ಭೇಟಿ ನೀಡಿ ಪರಿಶೀಲಿಸಿದರು.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಕಾರ್ಯದ ಕುರಿತಾಗಿ ಕೈಗೊಂಡಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಗಳೊಂದಿಗೆ ಉಪವಿಭಾಗಾಧಿಕಾರಿ ಟಿ. ಜವರೇಗೌಡ ಹಾಜರಿದ್ದರು.

ಶಾಸಕ ಕೆ.ಜಿ. ಬೋಪಯ್ಯ ಅವರು ಈ ಸಂದರ್ಭ ಅಲ್ಲೇ ಭೋಜನ ಸ್ವೀಕರಿಸಿದರು. ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹಾಗೂ ಪದಾಧಿಕಾರಿಗಳು ಹಾಜರಿದ್ದರು.