ವೀರಾಜಪೇಟೆ, ಏ. 24 : ಕೊರೊನಾ ಮಾಹಾಮಾರಿ ವಿರುದ್ಧದ ಹೋರಾಟಕ್ಕೆ ವೀರಾಜಪೇಟೆ ಕೊಡವ ಸಮಾಜದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಗಳ ಧನ ಸಹಾಯದ ಚೆಕ್ ಅನ್ನು ಶಾಸಕರ ಭವನದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಸಮಾಜದ ಪ್ರಮುಖರು ಇಂದು ನೀಡಿದರು.ಈ ಸಂದರ್ಭ ಮಾತನಾಡಿದ ಕೊಡವ ಸಮಾಜದ ಅಧ್ಯಕ್ಷ ವಾಂಚಿರ ನಾಣಯ್ಯ ನಾಗರಿಕರು ಮುಂಜಾಗೃತಾ ಕ್ರಮಗಳನ್ನು ಚಾಚು ತಪ್ಪದೆ ಪಾಲಿಸಬೇಕು, ಸಾರ್ವಜನಿಕರ ಆರೋಗ್ಯ ಬಹು ಮುಖ್ಯವಾಗಿದೆ ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿದಲ್ಲಿ ಸಹಾಯ ಮಾಡಿದಂತಾಗುತ್ತದೆ ಎಂದು ಹೇಳಿದರು.ಚೆಕ್ ನೀಡುವ ಸಂದರ್ಭದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಕುಯಿಮಂಡ ಕಿರಣ್ ಹಾಜರಿದ್ದರು. - ಕೆ.ಕೆ.ಎಸ್.