ವೀರಾಜಪೇಟೆ, ಏ. 24: ತಿತಿಮತಿ ಬಳಿಯ ಬಾಳೆಲೆ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ನಾಲ್ಕು ಲೀಟರ್‍ಗಳಷ್ಟು ಕಳ್ಳಭಟ್ಟಿ ಸಾರಾಯಿ ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿದ ಅಬಕಾರಿ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಮೂವರನ್ನು ಬಂಧಿಸಿ ಕಾರನ್ನು ವಶಪಡಿಸಿ ಕೊಂಡಿದ್ದಾರೆ. ಮಧು, ಪೂವಯ್ಯ, ಕಾವೇರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.