ಕೂಡಿಗೆ, ಏ. 28: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆಗೋಟೆ ನಿವಾಸಿ ಸಿದ್ದಯ್ಯ ಎಂಬವರ ಪುತ್ರ ದಿನೇಶ್ (36) ಎಂಬಾತ ತನ್ನ ಜಮೀನಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಹಾಗೂ ಮಗುವನ್ನು ಅಗಲಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.