ಸಿದ್ದಾಪುರ, ಏ. 30: ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳಿಗೆ ಇದೀಗ ಚಾಲನೆ ದೊರೆತಿದೆ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಹಲವಾರು ಕಾಮಗಾರಿಗಳು ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು.

ಇದೀಗ ನೆಲ್ಲಿಹುದಿಕೇರಿ ಪಟ್ಟಣದ ಸಮೀಪದ ನಾಲ್ಕನೇ ವಾರ್ಡಿನಲ್ಲಿ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಗ್ರಾಮ ಪಂಚಾಯಿತಿ ಪಿಡಿಓ ಅನಿಲ್ ಕುಮಾರ್ ನೇತೃತ್ವದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.