ಕೂಡಿಗೆ, ಏ. 30: ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಗ್ರಾಮಪಡೆ ಸಭೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ವರದಿಯನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿಯಿತ್ತರು. ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿ, ಈ ಹೋರಾಟಕ್ಕೆ ಶ್ರಮ, ಶುಚಿತ್ವದ ಕಡೆಗೆ ಹೆಚ್ಚಿನ ಗಮನ ಹರಿಸುವ ಬಗ್ಗೆ ತಿಳುವಳಿಕೆ ನೀಡಬೇಕು. ಇಲಾಖೆಯವರು ನೀಡಿರುವ ನಿಯಮಗಳನ್ನು ಎಲ್ಲರೂ ಪಾಲಿಸುವಂತೆ ತಿಳಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಕೆ.ಟಿ. ಗಿರೀಶ್, ಸದಸ್ಯರುಗಳಾದ ರವಿ, ರಾಮಚಂದ್ರ, ಕೃಷ್ಣ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಸೇರಿದಂತೆ ವಿವಿಧ ಸಮಿತಿಯ ಸದಸ್ಯರುಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.