ಮಡಿಕೇರಿ, ಏ. 29: ಕೊಡಗು ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿರುತ್ತಾರೆ.

ಇತರ ಜಿಲ್ಲೆ/ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರೂ ಸೇರಿದಂತೆ 14 ದಿನಗಳೊಳಗಿರುವ ಗೃಹ ಸಂಪರ್ಕ ತಡೆಯಲ್ಲಿರುವ ಪ್ರಕರಣಗಳ ವಿವರಗಳು ಕೆಳಕಂಡಂತಿವೆ:

ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರ ಜಿಲ್ಲೆಗಳ ಜನರು-1002, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಇತರ ರಾಜ್ಯದ ಜನರು-24, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-1026.

ಇಲ್ಲಿಯವರೆಗೆ ಒಟ್ಟು 709 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.

ಪಾಸಿಟಿವ್ ಪ್ರಕರಣಗಳು-1 (ಪ್ರಸ್ತುತ ಗುಣಮುಖರಾಗಿದ್ದಾರೆ), ನೆಗೆಟಿವ್ ವರದಿ ಬಂದ ಪ್ರಕರಣಗಳು-646, ವರದಿ ನಿರೀಕ್ಷಿತ ಪ್ರಕರಣಗಳು-62. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 29 ಜನರು ದಾಖಲಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.