ಶನಿವಾರಸಂತೆ, ಏ. 29 : ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತವೇರಿ ಗ್ರಾಮದಲ್ಲಿ ಸರಕಾರದ ಅನುದಾನದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯಿಂದ ನಿರ್ಮಿಸಲ್ಪಟ್ಟಿರುವ ಸಮುದಾಯ ಭವನ ಖಾಲಿ ಇದ್ದು, ದುರುಪಯೋಗಗೊಳ್ಳುತ್ತಿದೆ ಎಂದು ಕರವೇ ತಾಲೂಕು ಘಟಕದ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಆರೋಪಿಸಿದ್ದಾರೆ.

ಕೆಲವು ಕಿಡಿಗೇಡಿಗಳು ತಮಗೆ ಬೇಕಾದ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಭವನದಲ್ಲಿ ಕುಳಿತು ಜೂಜಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿರುವ ಘಟನೆಯೂ ನಡೆದಿದೆ.

ಖಾಲಿ ಇರುವ ಈ ಸಮುದಾಯ ಭವನವನ್ನು ಗೌಡಳ್ಳಿ ಗ್ರಾಮ ಪಂಚಾಯಿತಿ ವಶಕ್ಕೆ ಪಡೆದು ಸರಕಾರಿ ಕೆಲಸಕ್ಕೆ, ಕಾರ್ಯಕ್ರಮಗಳಿಗೆ ಬಳಸಬೇಕು ಎಂದು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ, ಕರವೇ ಹೋಬಳಿ ಘಟಕದ ಅಧ್ಯಕ್ಷ ಆನಂದ್, ಕಾರ್ಯದರ್ಶಿ ಪ್ರವೀಣ್ ಮತ್ತಿತರ ಕಾರ್ಯಕರ್ತರು ಮನವಿ ಮಾಡಿದ್ದಾರೆ.