ಸಿದ್ದಾಪುರ, ಮೇ 2: ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಹಾಗೂ ವಾಹನವನ್ನು ವಶಕ್ಕೆ ಪಡೆಯುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾg.É ಸಿದ್ದಾಪುರದ ಗುಹ್ಯ ಗ್ರಾಮದ ಕೂಡುಗದ್ದೆ ಎಂಬಲ್ಲಿ ಕಾವೇರಿ ನದಿಯಿಂದ ಅಕ್ರಮವಾಗಿ (ಕೆ.ಎ - 12-ಎ-4216) ಮಿನಿಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದಾಗ ಸಿದ್ದಾಪುರ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ವಾಹನ ಸಹಿತ ನಾಲ್ವರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಎಸ್. ಕಾರ್ತಿಕ್, ಎಂ. ಮೋಹನ್, ಟಿ.ಎಂ. ವಿನು, ಎಂ. ಮೋಹನ್ ಇವರುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.