ಸೋಮವಾರಪೇಟೆ, ಮೇ 3: ಕೊರೊನಾ ವೈರಸ್‍ನಿಂದಾಗಿ ಜಾರಿಯಲ್ಲಿದ್ದ ಲಾಕ್‍ಡೌನ್ ಸಡಿಲಿಕೆಗೊಂಡ ಹಿನ್ನೆಲೆ ಅರ್ಧಕ್ಕೆ ನಿಂತಿದ್ದ ಕೆಲ ರಸ್ತೆ ಕಾಮಗಾರಿಗಳಿಗೆ ಮರು ಚಾಲನೆ ನೀಡಲಾಗುತ್ತಿದೆ.

ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಕರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿಯ ಅನುದಾನದಲ್ಲಿ 5 ಲಕ್ಷ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದ್ದ ಕಾಂಕ್ರಿಟ್ ರಸ್ತೆ ಕಾಮಗಾರಿ ಲಾಕ್‍ಡೌನ್ ಹಿನ್ನೆಲೆ ಸ್ಥಗಿತಗೊಂಡಿತ್ತು.

ಇದೀಗ ಲಾಕ್‍ಡೌನ್ ಸಡಿಲಿಕೆಯಾಗಿದ್ದು, ಕಾಮಗಾರಿಗಳನ್ನು ನಿರ್ವಹಿಸಲು ಜಿಲ್ಲಾಡಳಿತ ಸೂಚಿಸಿರುವ ಹಿನ್ನೆಲೆ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಸ್ಥಳಕ್ಕೆ ಜಿ.ಪಂ. ಸದಸ್ಯ ಬಿ.ಜೆ. ದೀಪಕ್ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರಲ್ಲದೆ, ಮಳೆಗಾಲ ಪ್ರಾರಂಭವಾಗಿರುವದರಿಂದ ತ್ವರಿತವಾಗಿ ಕಾಮಗಾರಿಗಳು ನಡೆಯಬೇಕು ಎಂದು ತಿಳಿಸಿದರು.