ವೀರಾಜಪೇಟೆ, ಮೇ 4: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಇಲ್ಲಿನ ಸಮುಚ್ಚಯ ನ್ಯಾಯಾಲಯದಲ್ಲಿ ನ್ಯಾಯಾಧೀಶರುಗಳು ಸೇರಿದಂತೆ ಸುಮಾರು 35 ಮಂದಿ ಸಿಬ್ಬಂದಿಗಳಿಗೆ ಕೊರೊನಾ ವೈರಸ್ಗೆ ಸಂಬಂಧಿಸಿದಂತೆ ಥರ್ಮಲ್ ಸ್ಕ್ರೀನ್ ಹಾಗೂ ಇತರ ವೈದ್ಯಕೀಯ ತಪಾಸಣೆ ಮಾಡಲಾಯಿತು. ಇಂದು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಮುಚ್ಚಯ ನ್ಯಾಯಾಲಯದ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕಾರ್ಯಾರಂಭ ಮಾಡಿತು. ನ್ಯಾಯಾಲಯ ಪ್ರವೇಶಿಸಲು ಮಾಸ್ಕ್ ಧರಿಸಿ ಒಮ್ಮೆಗೆ ಐದು ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ನಾಳೆಯಿಂದ ಸಮುಚ್ಚಯ ನ್ಯಾಯಾಲಯಗಳ ವಿವಿಧ ನ್ಯಾಯಾಲಯಗಳು ತೆರೆದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಲು ಷರತ್ತು ವಿಧಿಸಲಾಗಿದೆ.
ದಂಡ ವಿಧಿಸಿದ ಪಟ್ಟಣ ಪಂಚಾಯಿತಿ
ಲಾಕ್ಡೌನ್ ನಿರ್ಬಂಧ ಉಲ್ಲಂಘಿಸಿ ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಮಾಲೀಕರು ಸೇರಿದಂತೆ ನಾಲ್ಕು ಮಂದಿ ಗ್ರಾಹಕರಿಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಸಿಬ್ಬಂದಿಗಳು ದಂಡ ವಿಧಿಸಿದ್ದಾರೆ.