ಕುಶಾಲನಗರ, ಮೇ 4: ಜಿಲ್ಲಾ ರಕ್ತನಿಧಿ ಘಟಕದ ಆಶ್ರಯದಲ್ಲಿ ವಾಸವಿ ಮಹಲ್ ಸಭಾಂಗಣದಲ್ಲಿ ಜಿಲ್ಲಾ ರಕ್ತನಿಧಿ ಘಟಕದ ವೈದ್ಯ ಡಾ. ಕರುಂಬಯ್ಯ ತಂಡದಿಂದ ರಕ್ತದಾನ ಶಿಬಿರ ನಡೆಯಿತು. ರಕ್ತದಾನದ ಮಹತ್ವ ಮತ್ತು ಅವಶ್ಯಕತೆ ಬಗ್ಗೆ ಡಾ.ಕರುಂಬಯ್ಯ ಮಾಹಿತಿ ನೀಡಿದರು.
ಶಿಬಿರದಲ್ಲಿ 40 ಮಂದಿ ದಾನಿಗಳು ರಕ್ತದಾನ ಮಾಡಿದರು. ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ವಿ.ಪಿ. ನಾಗೇಶ್, ಕಾರ್ಯದರ್ಶಿ ಅಶೋಕ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.