ಮಡಿಕೇರಿ, ಮೇ 5: ಮಡಿಕೇರಿ ಪ್ರವಾಸಿ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ರೂ. 1500 ಧನ ಸಹಾಯವನ್ನು ಮಾಡಲಾಗಿದೆ.

ಪ್ರವಾಸೋದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಇನ್ನು ಮುಂದೆ ಯಾವಾಗ ಪ್ರವಾಸೋದ್ಯಮ ಬೆಳೆಯುತ್ತದೆ ಎನ್ನುವ ನಿರೀಕ್ಷೆಯೂ ಇಲ್ಲದೇ ಕಂಗೆಟ್ಟಿರುವ ಚಾಲಕರಿಗೆ ಧನ ಸಹಾಯವನ್ನು ಸಂಘದ ವತಿಯಿಂದ ನೀಡಲಾಗಿದೆ. ಈ ಸಂದರ್ಭ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.