ಗೋಣಿಕೊಪ್ಪಲು, ಮೇ 6: ಸುದೀರ್ಘ 29 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿ, ಗೋಣಿಕೊಪ್ಪ ಪೊಲೀಸ್ ಠಾಣೆಯ ಎಎಸ್‍ಐ ಆಗಿ ನಿವೃತ್ತ್ತಿ ಹೊಂದಿದ ಜಿ.ಎಸ್. ಚಂದ್ರಯ್ಯ ಅವರನ್ನು ಹಿರಿಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಬೀಳ್ಕೊಟ್ಟರು.

ಸರಳ ಸಮಾರಂಭದಲ್ಲಿ ಮಾತನಾಡಿz ಡಿ.ವೈ.ಎಸ್. ಪಿ.ಜಯಕುಮಾರ್ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಆನೇಕ ರೀತಿಯ ಸಮಸ್ಯೆಗಳನ್ನು ಎದುರಿಸಿ ಯಾವುದೇ ರೀತಿಯ ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ನಿರ್ವಹಿಸುವುದು ಸಾಹಸದ ಕೆಲಸ ಆ ಕೆಲಸವನ್ನು ಚಂದ್ರಯ್ಯ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ರಾಮರೆಡ್ಡಿ, ಠಾಣಾಧಿಕಾರಿ ಸುರೇಶ್ ಬೋಪಣ್ಣ, ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.