ಕೂಡಿಗೆ, ಮೇ 6: ಕೂಡಿಗೆಯ ಕೃಷಿ ಕ್ಷೇತ್ರದ ಆವರಣಕ್ಕೆ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಭೇಟಿ ನೀಡಿ ಕೃಷಿ ಇಲಾಖೆಗೆ ಸೇರಿದ 25 ಎಕರೆ ಪ್ರದೇಶದ ಗದ್ದೆಗಳ ಸ್ಥಳವನ್ನು ಪರಿಶೀಲಿಸಿದರು.

ನಂತರ ಜಿಲ್ಲೆಯ ಪ್ರಮುಖ ಮಣ್ಣು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಮಣ್ಣು ಪರೀಕ್ಷೆಯ ಹೊಸ ಮಾದರಿ ಪರೀಕ್ಷಾ ಘಟಕಗಳನ್ನು ವೀಕ್ಷಣೆ ಮಾಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಕೃಷಿ ಕ್ಷೇತ್ರ ಜಾಗವನ್ನು ವೀಕ್ಷಣೆ ಮಾಡಲಾಗಿದೆ. ಈ ಪ್ರದೇಶದಲ್ಲಿ ರಾಜ್ಯ ಮಟ್ಟದ. ಜೀಜೋತ್ಪನ್ನ ಕೇಂದ್ರ ವನ್ನು ಪ್ರಾರಂಭಿಸುವ ಚಿಂತನೆ ಮಾಡಲಾಗಿದೆ ಅದನ್ನು ಕಾರ್ಯಗತಗೊಳಿಸಲು ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ ಮುಂದಿನ ಯೋಜನೆಯನ್ನು ರೂಪಿಸಲಾಗುವುದು ಎಂದರು. ಜಿಲ್ಲೆಯ ರೈತರಿಗೆ ಬೇಕಾಗುವ ಎಲ್ಲಾ ಬಿತ್ತನೆ ಬೀಜ, ರಸಗೊಬ್ಬರ, ಕೃಷಿಯ ಯಂತ್ರೋ¥ Àಕರಣಗಳನ್ನು ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಲ್ಲಿ ದಾಸ್ತಾನು ಮಾಡ ಲಾಗುತ್ತಿದೆ ಅದರ ಸದುಪಯೋಗ ಪಡೆದುಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿದರು. ಕೃಷಿ ಕ್ಷೇತ್ರದ ಜಾಗದಲ್ಲಿ ಮಿನಿ ವಿಮಾನ ನಿಲ್ದಾಣ. ಪ್ರಾರಂಭಿಸುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ

(ಮೊದಲ ಪುಟದಿಂದ) ಸಚಿವರು ತಮ್ಮ ಇಲಾಖೆಯ ಜಾಗವನ್ನು ಬೇರೆ ಕ್ಷೇತ್ರಕ್ಕೆ ನೀಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ತಮ್ಮ ಗಮನಕ್ಕೆ ಬಂದಿರುವುದಿಲ್ಲ ಎಂದು ಪ್ರತಿಕ್ರಿಯಿಸಿದರು. ಈ ಸಂದರ್ಭ ಜಿಲ್ಲೆಯ ಕೃಷಿ ಉಪ ನಿರ್ದೇಶಕ ಕೆ. ರಾಜು ಸೋಮವಾರಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಹೆಚ್.ಎಸ್. ರಾಜಶೇಖರ ಉಪ ಕೃಷಿ ವಿಶೇಷ ನಿರ್ದೇಶಕ ಎ.ಸಿ. ಮಂಜು, ಕೂಡಿಗೆ ಕೃಷಿ ಕ್ಷೇತ್ರದ ಅಧಿಕಾರಿ ಮಾದವರಾವ್ ಸೇರಿದಂತೆ ಮಣ್ಣು ಪರೀಕ್ಷಾ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು. - ಕೆ.ಕೆ. ನಾಗರಾಜಶೆಟ್ಟಿ