ಮಡಿಕೇರಿ, ಮೇ 6: ಲಾಕ್‍ಡೌನ್‍ನಿಂದಾಗಿ ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ಸಾರಿಗೆ ಇಲಾಖೆ ಬಸ್ ಮೂಲಕ ಕಳುಹಿಸಿಕೊಡಲಾಯಿತು. ಗ್ರಾ.ಪಂ. ಅಧ್ಯಕ್ಷೆ ಲಕ್ಕಪ್ಪನ ಕಾವೇರಮ್ಮ ಹರೀಶ್, ಸದಸ್ಯ ಬಿ.ಎನ್. ರಮೇಶ್, ಅಭಿವೃದ್ಧಿ ಅಧಿಕಾರಿ ಚಂಗಪ್ಪ, ಆಶಾ ಕಾರ್ಯಕರ್ತೆಯರು, ಇತರರು ಕಾರ್ಮಿಕರನ್ನು ಬೀಳ್ಕೊಟ್ಟರು.