ನಾಪೆÇೀಕ್ಲು, ಮೇ 7: ನಾಪೆÇೀಕ್ಲು ಕೊಡವ ಸಮಾಜದಲ್ಲಿ ಹಿಂದೂ ಸಂಘಟನೆ ವತಿಯಿಂದ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಶಿಬಿರದಲ್ಲಿ ರಕ್ತದಾನ ಮಾಡಿದರು. ಕಾರ್ಯಕ್ರಮದ ನೇತೃತ್ವವನ್ನು ಸಂಘಟನೆಯ ಮುಖಂಡ ಕೇಲೇಟಿರ ದೀಪು ದೇವಯ್ಯ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು, ಲಾಕ್‍ಡೌನ್ ಕಾರಣದಿಂದ ಬೇಸಿಗೆಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ನಡೆಯಬೇಕಾಗಿದ್ದ ರಕ್ತದಾನ ಶಿಬಿರಗಳು ರದ್ದುಗೊಂಡಿವೆ. ಇಂತಹ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುವ ಕಾರಣದಿಂದ ನಮ್ಮ ಸಂಘಟನೆಯ ವತಿಯಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಇದು ಆರಂಭದ ರಕ್ತದಾನ ಶಿಬಿರವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ರಕ್ತದಾನ ಶಿಬಿರಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು. ಶಿಬಿರದಲ್ಲಿ ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯ ಡಾ. ಕರುಂಬಯ್ಯ ಮತ್ತು ಸಿಬ್ಬಂದಿ ಇದ್ದರು.