ಮಡಿಕೇರಿ, ಮೇ 7: ಪ್ರಸಕ್ತ ಸಾಲಿನಲ್ಲಿ ಮಳೆಯಿಂದ ಉಂಟಾಗಬಹುದಾದ ಹಾನಿ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಪಂಚಾಯಿತಿವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ 2 ವರ್ಷದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಹಾಗೆಯೇ ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹೋಬಳಿವಾರು ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಭಾದಕಕ್ಕೆ ಒಳಗಾಗಬಹುದಾದ (ಸಂಭವನೀಯ ಪ್ರಕೃತಿ ವಿಕೋಪದಿಂದಾಗಬಹುದಾದ) ಹಾನಿಯನ್ನು ನಿಭಾಯಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕಾಗಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮಕ್ಕಾಗಿ ನೇಮಿಸಿರುವ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನೋಡಲ್ ಅಧಿಕಾರಿಗಳ ವಿವರ ಇಂತಿದೆ: ಮಡಿಕೇರಿ ನಗರ-ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ ಗ್ರಾಮಾಂತರ- ಉಪ ನಿರ್ದೇಶಕರು ಕೃಷಿ ಇಲಾಖೆ, ಸಂಪಾಜೆ ಹೋಬಳಿ-ಸಹಾಯಕ ಕಾರ್ಯಪಾಲಕ ಅಭಿಯಂತರರು ನಗರಾಭಿವೃದ್ಧಿ ಕೋಶ, ಭಾಗಮಂಡಲ ಹೋಬಳಿ-ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ, ನಾಪೋಕ್ಲು ಹೋಬಳಿ- ಅಬಕಾರಿ ಉಪ ಆಯುಕ್ತರು,

ಕುಶಾಲನಗರ ನಗರ-ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕುಶಾಲನಗರ ಗ್ರಾಮಾಂತರ- ಭೂ ದಾಖಲೆ ಇಲಾಖೆಯ ಸಹಾಯಕ ನಿರ್ದೇಶಕರು, ಮಡಿಕೇರಿ ತಾಲೂಕು, ಸೋಮವಾರಪೇಟೆ ನಗರ-ಉಪ ನಿರ್ದೇಶಕರು, ಡಯಟ್ ಕೂಡಿಗೆ, ಸೋಮವಾರಪೇಟೆ ಗ್ರಾಮಾಂತರ- ಉಪ ನಿಬಂಧಕರು ಸಹಕಾರ ಸಂಘಗಳ ಇಲಾಖೆ. ಶಾಂತಳ್ಳಿ- ವೀರಾಜಪೇಟೆ ತಾಲೂಕು ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡ್ಲಿಪೇಟೆ- ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಅಧಿಕಾರಿ, ಶನಿವಾರಸಂತೆ- ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಸುಂಟಿಕೊಪ್ಪ- ಸಹಾಯಕ ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಅಮ್ಮತ್ತಿ-ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿಗಳು, ಪೊನ್ನಂಪೇಟೆ ವ್ಯಾಪ್ತಿಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಗಳು ವೀರಾಜಪೇಟೆ ತಾಲೂಕು. ಬಾಳೆಲೆ-ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ, ವೀರಾಜಪೇಟೆ ನಗರ- ಉಪ ನಿರ್ದೇಶಕರು, ತೋಟಗಾರಿಕಾ ಇಲಾಖೆ, ವೀರಾಜಪೇಟೆ ಗ್ರಾಮಾಂತರ-ಹಿರಿಯ ಭೂ ವಿಜ್ಞಾನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಶ್ರೀಮಂಗಲ-ಉಪ ಕಾರ್ಯದರ್ಶಿ ಕೊಡಗು ಜಿಲ್ಲಾ ಪಂಚಾಯಿತಿ, ಹುದಿಕೇರಿ ವ್ಯಾಪ್ತಿಗೆ ಪೊನ್ನಂಪೇಟೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ವೀರಾಜಪೇಟೆ ತಾಲೂಕು ಇವರನ್ನು ನೇಮಿಸಲಾಗಿದೆ.

ನೋಡಲ್ ಅಧಿಕಾರಿಯಾಗಿ ನೇಮಿಸಿದ ಅಧಿಕಾರಿಗಳು ಈಗಾಗಲೇ ಕೋವಿಡ್-19 ಹರಡದಂತೆ ತಡೆಗಟ್ಟಲು ವಹಿಸಿರುವ ಕಾರ್ಯಗಳೊಂದಿಗೆ ತಮಗೆ ವಹಿಸಿದ ಹೋಬಳಿಗಳಲ್ಲಿ 2020-21ನೇ ಸಾಲಿನಲ್ಲಿ ಅತಿವೃಷ್ಟಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.