ಸೋಮವಾರಪೇಟೆ, ಮೇ 7 : ತಾಲೂಕಿನ ಯಡವನಾಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಎನ್.ಎಸ್. ಮುತ್ತಪ್ಪ ಅವರಿಗೆ ಅರಣ್ಯ ಇಲಾಖೆಯಿಂದ ಬಿಡುಗಡೆಯಾದ ಪರಿಹಾರ ಧನದ ಚೆಕ್‍ನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಿತರಿಸಿದರು.
ಯಡವನಾಡು ಬಳಿಯಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದ ಪರಿಣಾಮ ಮುತ್ತಪ್ಪ ಅವರ ದೇಹದ ವಿವಿಧ ಭಾಗಗಳಿಗೆ ಹಾನಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಅರಣ್ಯ ಇಲಾಖೆಯಿಂದ ರೂ. 1.90 ಲಕ್ಷ ಪರಿಹಾರ ಹಣ ಬಿಡುಗಡೆಯಾಗಿದ್ದು, ಶಾಸಕರು ಗಾಯಾಳು ಮುತ್ತಪ್ಪ ಅವರಿಗೆ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭ ಅರಣ್ಯ ಇಲಾಖೆಯ ಎಸಿಎಫ್ ನೆಹರು, ಆರ್‍ಎಫ್‍ಓ ಶಮಾ ಸೇರಿದಂತೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.