ಮಡಿಕೇರಿ, ಮೇ 7: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2019 ರಿಂದ ಡಿಸೆಂಬರ್ 2019 ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಕೋವಿಡ್-19 ಪರಿಸ್ಥಿತಿ ಹಿನ್ನೆಲೆಯಲ್ಲಿ ಪುಸ್ತಕ ಕಳುಹಿಸುವ ಕೊನೆಯ ದಿನಾಂಕವನ್ನು ತಾ. 30 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ಚಿತ್ರ ಕಲಾವಿದರ ಪೂರ್ಣ ವಿಳಾಸದ ವಿವರಗಳೊಂದಿಗೆ ಪುಸ್ತಕದ 2 ಪ್ರತಿಗಳನ್ನು ತಾ. 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ದೂರವಾಣಿ ಸಂಖ್ಯೆ: 080-22484516/ 22107704 ನ್ನು ಸಂಪರ್ಕಿಸಬಹುದಾಗಿದೆ.