ನಾಪೆÇೀಕ್ಲು, ಮೇ. 9: ಅಕ್ರಮ ಮರಳುಗಾರಿಕೆಗೆ ಬಳಸಲಾಗುತ್ತಿದ್ದ ಕಬ್ಬಿಣದ ತೆಪ್ಪವನ್ನು ಪಾರಾಣೆ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಮುರಿ ಗ್ರಾಮದ ಕಾವೇರಿ ನದಿಯಲ್ಲಿ ನಾಪೆÇೀಕ್ಲು ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮರಳುಗಾರಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ನಾಪೆÇೀಕ್ಲು ಠಾಣಾಧಿಕಾರಿ ಆರ್.ಕಿರಣ್ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿದ ಸಂದರ್ಭ ಮರಳುಗಾರಿಕೆ ನಡೆಸುತ್ತಿದ್ದವರು ನಾಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಕಬ್ಬಿಣದ ತೆಪ್ಪ, ಫೈಬರ್ ಕುಕ್ಕೆಗಳು, ಗುದ್ದಲಿ ಮತ್ತಿತರ ಸಾಮಗ್ರಿಗಳನ್ನು ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.