ಕುಶಾಲನಗರ, ಮೇ 9: ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಂಟಲು ದ್ರವ ಪರೀಕ್ಷೆಯ ಘಟಕವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಸರಕಾರಿ ಆಸ್ಪತ್ರೆ ಆವರಣದಲ್ಲಿ ಮೊದಲನೇ ಮಹಡಿಯಲ್ಲಿ ನಿರ್ಮಾಣಗೊಂಡಿರುವ ಈ ಘಟಕದಲ್ಲಿ ಕೊರೊನಾ ಸೋಂಕಿತ ರೋಗಿಯ ಪರೀಕ್ಷೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಮಾಹಿತಿ ನೀಡಿದರು.

ಈ ಸಂದರ್ಭ ಆರೋಗ್ಯ ಕೇಂದ್ರದ ಡಾ. ಮಧುಸೂದನ್, ಡಾ. ಅಂಜಲಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಜಯ್‍ಕುಮಾರ್, ಸ್ಥಳೀಯ ಬಿಜೆಪಿ ಪ್ರಮುಖರು ಇದ್ದರು.