ಕುಶಾಲನಗರ, ಮೇ 9: ಪ್ರಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಖಾಸಗಿ ಬಸ್ ನಿಲ್ದಾಣದಲ್ಲಿ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಕೃತಿಯ ಆರಾಧನೆಯ ಮೂಲಕ ಉತ್ತಮ ಪರಿಸರ ನಿರ್ಮಾಣ ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದರು. ಗಿಡ ನೆಟ್ಟು ಪೋಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದ ಶಾಸಕರು, ಕುಶಾಲನಗರದಲ್ಲಿ ಕಾವೇರಿ ಪರಿಸರ ರಕ್ಷಣಾ ಬಳಗದ ವತಿಯಿಂದ ಕಳೆದ ಹಲವಾರು ವರ್ಷಗಳಿಂದ ಗಿಡ ಮರಗಳನ್ನು ಬೆಳೆಸುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭ ಪ.ಪಂ. ಮುಖ್ಯಾಧಿಕಾರಿ ಸುಜಯ್‍ಕುಮಾರ್, ಸದಸ್ಯರಾದ ಜಯವರ್ಧನ್, ಗ್ರಾ.ಪಂ. ಸದಸ್ಯ ಎಂ.ಎಸ್. ಶಿವಾನಂದ, ಬಿಜೆಪಿ ನಗರಾಧ್ಯಕ್ಷ ಕೆ.ಜಿ. ಮನು, ಪ್ರಮುಖರಾದ ಎಂ.ಎಂ. ಚರಣ್, ವೈಶಾಖ್, ಬಳಗದ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ಮಂಡೇಪಂಡ ಬೋಸ್ ಮೊಣ್ಣಪ್ಪ, ಶಿವಶಂಕರ್, ಕೆ.ಕೆ. ನಾಗರಾಜಶೆಟ್ಟಿ, ಆದರ್ಶ್ ಮತ್ತಿತರರು ಇದ್ದರು.