ಕೂಡಿಗೆ, ಮೇ 9: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಲಾಕ್‍ಡೌನ್ ಹಿನ್ನೆಲೆ ಕೊರೊನಾ ವಿರುದ್ಧದ ಹೋರಾಟದಲ್ಲಿ ನಿರತರಾಗಿರುವ 150ಕ್ಕೂ ಹೆಚ್ಚು ಮಂದಿಗೆ ಆಹಾರ ಕಿಟ್‍ಗಳನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ವಿತರಣೆ ಮಾಡಿದರು.
ಕೊಡಗಿನ ಗಡಿಭಾಗ ಶಿರಂಗಾಲ ತಪಾಸಣಾ ಗೇಟ್‍ನಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ತೊಡಗಿದವರಿಗೆ ಆಹಾರ ಕಿಟ್‍ಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ, ಕೊರೊನಾ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.
ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳಿಗೆ ಆಯಾ ತಪಾಸಣಾ ಕೇಂದ್ರದಲ್ಲಿ ಕೆಲಸ ನಿರ್ವಹಿಸುವವರಿಗೆ, ಹೋಬಳಿ ವ್ಯಾಪ್ತಿಯ ಗುಡ್ಡೆಹೊಸೂರು, ಕುಶಾಲನಗರ, ಕೂಡಿಗೆ, ಹೆಬ್ಬಾಲೆ, ಶಿರಂಗಾಲ ಭಾಗದ ಸರ್ಕಲ್‍ಗಳಲ್ಲಿ ಕರ್ತವ್ಯದಲ್ಲಿ ಇದ್ದವರಿಗೆ ಆಹಾರ ಕಿಟ್‍ಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಜಿಲ್ಲಾ ಐಎನ್‍ಟಿಸಿ ಘಟಕದ ಅಧ್ಯಕ್ಷ ಟಿ.ಪಿ. ಹಮೀದ್, ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಶಿರಂಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್, ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಹಾಜರಿದ್ದರು.