ಮಡಿಕೇರಿ, ಮೇ 10: ಕೊರೊನಾ ಲಾಕ್‍ಡೌನ್ ಹಿನ್ನೆಲೆ ಆದಾಯ ಕಳೆದುಕೊಂಡಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ 5000 ರೂಪಾಯಿ ಪರಿಹಾರ ಧನ ನೀಡಲಿದೆ. ಅರ್ಹರು ಸೇವಾಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಈ ಯೋಜನೆ ಪಡೆಯಲು ಯಾವೆಲ್ಲಾ ಚಾಲಕರು ಅರ್ಹರಾಗಿದ್ದಾರೆ ? ಮತ್ತು ಸರ್ಕಾರದ ಷರತ್ತುಗಳೇನು?

ಮಾಹಿತಿ ಇಂತಿದೆ : ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಫಲಾನುಭವಿಗಳು ದಿನಾಂಕ 01-03-2020ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸೇವಾಸಿಂಧು ಪೆÇೀರ್ಟಲ್‍ನಲ್ಲಿ ನಮೂದಿಸಬೇಕು. ಚಾಲಕರ ಆಧಾರ್ ಕಾರ್ಡ್ ವಿವರ, ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೆÇೀರ್ಟಲ್‍ನಲ್ಲಿ ನಮೂದಿಸಬೇಕು. ಚಾಲಕರ ಬ್ಯಾಂಕ್ ಅಕೌಂಟ್ ವಿವರ ಸಂಬಂಧಪಟ್ಟ ಬ್ಯಾಂಕ್‍ನ IಈSಅ ಕೋಡ್ ಒIಅಖ ಕೋಡ್‍ಗಳ ವಿವರಗಳನ್ನು ಸಹ ಪೆÇೀರ್ಟಲ್‍ಗೆ ನೀಡಬೇಕು.

ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು. ಆಟೋರಿಕ್ಷಾ ಅಥವಾ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.