ಕೂಡಿಗೆ, ಮೇ 11: ಹಾಸನ ಹಾಲು ಒಕ್ಕೂಟದ ವತಿಯಿಂದ ಕೊಡಗು ಜಿಲ್ಲೆಯ ಎಲ್ಲಾ ಹಾಲು ಉತ್ಪಾದಕರ ಸಂಘಗಳ ಸದಸ್ಯರುಗಳಿಗೆ ಹಾಲಿನ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅರಿವು ಕಾರ್ಯಾಗಾರವನ್ನು ಡೈರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಹಾಲು ಉತ್ಪಾದಕರಿಗೆ ಹಾಸನ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಎನ್.ಎಲ್. ಸುಂದರೇಶ್ ಮಾಹಿತಿ ನೀಡಿ, ರಾಸುಗಳಿಗೆ ಜಂತು ಹುಳಗಳ ಔಷಧಿ ನೀಡುವಿಕೆ, ವೈಜ್ಞಾನಿಕ ಹಾಲು ಇಳುವರಿಯ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಅರಿವು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್‍ಕುಮಾರ್ ಮಾತನಾಡಿದರು. ಕೂಡಿಗೆ ಡೈರಿ ಉಪ ವ್ಯವಸ್ಥಾಪಕ ನಂದೀಶ್, ಕೊಡಗು ಜಿಲ್ಲಾ ವಿಸ್ತರಣಾಧಿಕಾರಿ ಬಿ.ವಿ. ವೀಣಾ ಹಾಗೂ ಜಿಲ್ಲೆಯ ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರು ಹಾಜರಿದ್ದರು.