ಕುಶಾಲನಗರ, ಮೇ 11: ಕೊರೊನಾ ವಾರಿಯರ್ಸ್‍ಗೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ಅಪ್ಪಚ್ಚುರಂಜನ್ ಮತ್ತು ಗಣ್ಯರು ಗೌರವ ಸಲ್ಲಿಸಿದರು.

ಕಾವೇರಿ ನದಿ ಪ್ರವಾಹ ಸಂತ್ರಸ್ತರ ವೇದಿಕೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಗಡಿ ಕುಶಾಲನಗರ ಕೊಪ್ಪ ಸೇತುವೆ ಬಳಿ ಕಾರ್ಯನಿರ್ವಹಿಸುತ್ತಿರುವ ಕೋವಿಡ್-19 ಆರೋಗ್ಯ ತಪಾಸಣಾ ಕೇಂದ್ರದ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಕೊಪ್ಪ ಪೊಲೀಸ್ ತಪಾಸಣಾ ಕೇಂದ್ರದ ಸಿಬ್ಬಂದಿಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ಅಪ್ಪಚ್ಚುರಂಜನ್, ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಶ್ರೀ ಸದಾಶಿವ ಸ್ವಾಮೀಜಿ ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು.

ತಾಲೂಕು ತಹಶೀಲ್ದಾರ್ ಗೋವಿಂದರಾಜು, ಡಿವೈಎಸ್ಪಿ ಎಚ್.ಎಂ. ಶೈಲೇಂದ್ರ, ವೃತ್ತ ನಿರೀಕ್ಷಕ ಎಂ.ಮಹೇಶ್ ಸೇರಿದಂತೆ 30 ಕ್ಕೂ ಅಧಿಕ ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸಿ ಸಿಹಿ ಹಂಚಲಾಯಿತು.

ಈ ಸಂದರ್ಭ ಕಾವೇರಿ ನದಿ ಪ್ರವಾಹ ಸಂತ್ರಸ್ತರ ವೇದಿಕೆ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಗೌರವಾಧ್ಯಕ್ಷ ಎಂ.ಎಂ.ಚರಣ್, ಉಪಾಧ್ಯಕ್ಷ ತೋರೇರ ಉದಯಕುಮಾರ್, ಖಜಾಂಚಿ ಕೊಡಗನ ಹರ್ಷ, ಕಾರ್ಯದರ್ಶಿ ವರದ, ಬಿಜೆಪಿ ಪ್ರಮುಖರು ಇದ್ದರು.