ಪಾಲಿಬೆಟ್ಟ, ಮೇ 11:ದೇಶಾದ್ಯಂತ ಹರಡಿರುವ ಕೊರೊನಾ ವೈರಸ್ ತಡೆಗೆ ಪಾಲಿಬೆಟ್ಟ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಗಲಿರುಳು ಸೇವೆ ಸಲ್ಲಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ ಪಾಲಿಬೆಟ್ಟ ಟಾಟಾ ಕಾಫಿ ಸಂಸ್ಥೆಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಪಾಲಿಬೆಟ್ಟ ಟಾಟಾ ಕಾಫಿ ಸಂಸ್ಥೆಯ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸರಳ ಕಾರ್ಯಕ್ರಮದಲ್ಲಿ ಪಾಲಿಬೆಟ್ಟ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಣೇಶ್ ಹಾಗೂ ಕೊರೊನಾ ವಾರಿಯರ್ಸ್‍ಗಳಿಗೆ ಗೌರವ ಸಮರ್ಪಣೆ ಮಾಡಿದರು. ಈ ಸಂದರ್ಭ ಟಾಟಾ ಕಾಫಿ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಎಂ.ಬಿ ಗಣಪತಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು