ನಾಪೆÇೀಕ್ಲು, ಮೇ 11: ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂವರ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಧಾಳಿ ನಡೆಸಿರುವ ಪೊಲೀಸರು ಎರಡು ವಾಹನ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ನಾಪೋಕ್ಲು ಠಾಣಾಧಿಕಾರಿ ಆರ್. ಕಿರಣ್ ವಾಹನ ಸಹಿತ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಹರ್ಷ, ಶಿವಪ್ರಸಾದ್, ಫ್ರಾನ್ಸಿಸ್, ಬಶೀರ್ ಪಾಲ್ಗೊಂಡಿದ್ದರು.