ಮಡಿಕೇರಿ, ಮೇ 11 : ನೀರುಕೊಲ್ಲಿ ಇಬ್ನಿವಳವಾಡಿ ಗ್ರಾಮದ ಕೂಲಿ ಕಾರ್ಮಿಕ ಟಿ.ಎನ್. ಚಂದ್ರ ಎಂಬಾತನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ಕೊಲೆಯತ್ನ ಮಾಡಿದ ಆರೋಪದಡಿ ಅದೇ ಗ್ರಾಮದ ವಿಶ್ವನಾಥ್ ಹಾಗೂ ಪೆಮ್ಮಯ್ಯ ಎಂಬವರುಗಳ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ವಿಶ್ವನಾಥ್‍ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಗಾಯಾಳು ಚಂದ್ರ ಆಸ್ಪತ್ರೆಗೆ ದಾಖಲಾಗಿದ್ದು, ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಮುಂದಿನ ಕ್ರಮ ಕೈಗೊಂಡಿದ್ದಾರೆ.