ಮಡಿಕೇರಿ, ಮೇ 11: ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಇಂದು ಮಡಿಕೇರಿ ನಗರದಲ್ಲಿ ಸಾರ್ವಜನಿಕ ಹಿತದೃಷ್ಟಿ ಮನವಿಯ ಪೆÇೀಸ್ಟರನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಸ್ಥಳವನ್ನು ಶುಚಿಯಾಗಿಡುವ ನಿಟ್ಟಿನಲ್ಲಿ ಅಲ್ಲಲ್ಲಿ ಉಗುಳದಂತೆ, ಮಾಸ್ಕ್ ಕಡ್ಡಾಯದ ಬಗ್ಗೆ ಮತ್ತು ಉಲ್ಲಂಘಿಸಿದಲ್ಲಿ ತೆರಬೇಕಾದ ದಂಡದ ಬಗ್ಗೆ ಇದರಲ್ಲಿ ಮಾಹಿತಿಯನ್ನು ನೀಡಲಾಗಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ , ಡಿವೈಎಸ್ಪಿ ಬಾರಿಕೆ ದಿನೇಶ್ ಕುಮಾರ್,ಮಡಿಕೇರಿ ತಹಶೀಲ್ದಾರ್ ಮಹೇಶ್, ನಗರಸಭೆ ಆಯುಕ್ತರಾದ ರಮೇಶ್, ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್, ಮಾಜಿ ಅಧ್ಯಕ್ಷರಾದ ಜಿ. ಚಿದ್ವಿಲಾಸ್, ನಗರ ಅಧ್ಯಕ್ಷ ಧನಂಜಯ್ ಈ ಸಂದರ್ಭದಲ್ಲಿ ಹಾಜರಿದ್ದರು.