ನಾಪೆÇೀಕ್ಲು: ಪಟ್ಟಣದಲ್ಲಿ ಲಾಕ್‍ಡೌನ್ ನಿಯಮ ಉಲ್ಲಂಘಿಸಿದವರಿಗೆ ನಾಪೆÇೀಕ್ಲು ಪೆÇಲೀಸ್ ಠಾಣಾಧಿಕಾರಿ ಆರ್. ಕಿರಣ್ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದ 70 ಜನರಿಗೆ ದಂಡ ವಿಧಿಸಿದ್ದು, ಹೆಲ್ಮೆಟ್ ಧರಿಸದ 35 ದ್ವಿಚಕ್ರ ವಾಹನ ಚಾಲಕರಿಗೆ ದಂಡ ವಿಧಿಸಿದ್ದಾರೆ. ಅದರಂತೆ ಹಲವರಿಗೆ ಎಚ್ಚರಿಕೆ ನೀಡಿದ್ದು, ಲಾಕ್‍ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.ಸೋಮವಾರಪೇಟೆ: ಕೊರೊನಾ ವೈರಸ್ ಆತಂಕದ ಹಿನ್ನೆಲೆ ಸರ್ಕಾರ ಹತ್ತು ಹಲವು ನಿಯಮಗಳನ್ನು ಜನಸಾಮಾನ್ಯರ ಮೇಲೆ ಹೇರುತ್ತಿದ್ದು, ಕೊರೊನಾ ಸರಪಳಿ ತಡೆಗಟ್ಟಲು ನೂತನ ಆದೇಶಗಳನ್ನು ಜಾರಿಗೆ ತರುತ್ತಿದೆ.
ಸರ್ಕಾರದ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕ ಸ್ಥಳದಲ್ಲೇ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.
ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಅವರು 50 ಮಂದಿಗೆ ದಂಡ ವಿಧಿಸಿದ್ದರೆ, ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಅವರು ಈವರೆಗೆ 60 ಮಂದಿಗೆ ದಂಡ ವಿಧಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವದು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಂದಿಗೆ ಮುಲಾಜಿಲ್ಲದೇ ದಂಡ ವಿಧಿಸಲಾಗುತ್ತಿದೆ.ಸಿದ್ದಾಪುರ: ಲಾಕ್‍ಡೌನ್ ಸಡಿಲಿಕೆ ಮಾಡಿರುವ ಹಿನ್ನೆಲೆ ಭಾನುವಾರದಂದು ಸಿದ್ದಾಪುರದಲ್ಲಿ ಜನಸಂದಣಿ ಹೆಚ್ಚಾಗಿತ್ತು. ಸಿದ್ದಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾರ್ಮಿಕರು ಹೆಚ್ಚಾಗಿದ್ದು, ಈ ಮಂದಿ ವಾರಾಂತ್ಯದ ಸಂಬಳ ಪಡೆದು ಅಗತ್ಯ ವಸ್ತುಗಳನ್ನು ಖರೀದಿಸಲು ಆಗಮಿಸಿದ್ದರು.
ಸಿದ್ದಾಪುರ ಸಂತೆ ಮಾರುಕಟ್ಟೆಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಅಲ್ಲದೆ ಸಾಮಾಜಿಕ ಅಂತರ ಇಲ್ಲದೆ ನೂಕುನುಗ್ಗಲು ಕಂಡುಬಂದಿತು. ಇದನ್ನು ನಿಯಂತ್ರಿಸಲು ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ನೇತೃತ್ವದಲ್ಲಿ ಮುಖ್ಯಪೇದೆ ಬೋಪಯ್ಯ ಹಾಗೂ ಸಿಬ್ಬಂದಿ ಸ್ವಾಮಿ ಸೇರಿ ಸಂತೆ ಮಾರುಕಟ್ಟೆ ವ್ಯಾಪಾರಿಗಳ ಪೈಕಿ ಮಾಸ್ಕ್ ಧರಿಸದೆ ಹಾಗೂ ಅಂತರ ಇಲ್ಲದಿರುವುದನ್ನು ಗಮನಿಸಿ ನೂರು ರೂಪಾಯಿ ದಂಡ ವಿಧಿಸಲಾಯಿತು. ಸಾಮಗ್ರಿ ಹಾಗೂ ತರಕಾರಿಗಳನ್ನು ಕೊಂಡುಕೊಳ್ಳಲು ಜನರು ಮುಗಿಬಿದ್ದಿದ್ದರು.