ಕೂಡಿಗೆ, ಮೇ 11: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೂಸೂರು ಸಮೀಪದ ಜೇನುಕಲ್ಲು ಬೆಟ್ಟದ ಗ್ರಾಮದ ಉಪ ರಸ್ತೆಯ ಕಾಮಗಾರಿಯು ಕಳಪೆಯಾಗಿದ್ದು, ಇದನ್ನು ಸರಿಪಡಿಸುವಂತೆ ಅಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೂಡಿಗೆ ಗ್ರಾಮ ಪಂಚಾಯಿತಿ ಅನುದಾನ ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಯನ್ನು ಮಾಡುವಂತೆ ಮಾಸಿಕ ಸಭೆಯಲ್ಲಿ ತೀರ್ಮಾನವಾಗಿತ್ತು. ಆದರೆ ಇದೀಗ ಕಾಮಗಾರಿ ಕಳಪೆಯಾಗಿದ್ದು, ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.