ಮಡಿಕೇರಿ, ಮೇ 11: ಪರಿಶಿಷ್ಟ ಜಾತಿಯ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ರಚಿಸಲಾಗಿದೆ.

ಈ ಸಮಿತಿಗೆ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟ್ಟದ ಅನುಷ್ಠಾನ ಸಮಿತಿಗೆ ಪರಿಶಿಷ್ಟ ಜಾತಿಯ ಅಲೆಮಾರಿ / ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಜನಾಂಗದವರು ಅರ್ಜಿ ಸಲ್ಲಿಸಬಹುದಾಗಿದೆ. ನಾಮ ನಿರ್ದೇಶನ ಸದಸ್ಯರ ಅವಧಿಯು 2 ವರ್ಷಗಳು. ಈ ಸಮಿತಿಯು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಕುಂದುಕೊರತೆಗಳನ್ನು ಪರಿಹರಿಸುವುದು. ನಾಮ ನಿರ್ದೇಶಿತ ಸದಸ್ಯರುಗಳ ಅವಧಿಯು 2 ವರ್ಷ ಮುಗಿದ ನಂತರ ಹೊಸ ಸದಸ್ಯರನ್ನು ನೇಮಿಸಲಾಗುತ್ತದೆ.

ಈ ಷರತ್ತುಗಳಿಗೆ ಅನುಗುಣವಾಗಿ ಸದಸ್ಯತ್ವ ಹೊಂದಲು ಬಯಸುವವರು ಅವರ ಸ್ವ ವಿವರದೊಂದಿಗೆ ಜಾತಿ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಬೇಕು. ತಾ. 21 ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ರೇಸ್‍ಕೋರ್ಸ್ ರಸ್ತೆ, ಹೊಸ ಬಡಾವಣೆ, ಮಡಿಕೇರಿ, ಇಲ್ಲಿಗೆ ಸಲ್ಲಿಸುಂತೆ ಜಿಲ್ಲಾ ವ್ಯವಸ್ಥಾಪಕರು ಕೋರಿದ್ದಾರೆ.