ಮಡಿಕೇರಿ, ಮೇ 11 : ಕೊರೊನಾ ಲಾಕ್‍ಡಾನ್‍ನಿಂದ ಸಂಕಷ್ಟಕ್ಕೀಡಾ ಗಿರುವ ಅಸಂಘಟಿತ ಕಾರ್ಮಿಕರಿಗೆ ಘೋಷಿಸಲಾದ ಪ್ಯಾಕೇಜ್‍ನಲ್ಲಿ ಹಮಾಲಿ ಕಾರ್ಮಿಕರಿಗೂ ಆರ್ಥಿಕ ನೆರವು ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್‍ನ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.

ಈ ಸಂದರ್ಭ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ರಾಜ್ಯದಲ್ಲಿ ಸುಮಾರು 4 ರಿಂದ 5 ಲಕ್ಷದಷ್ಟಿರುವ ಹಮಾಲಿ ಕಾರ್ಮಿಕರ ಕುಟುಂಬಗಳು ಹಸಿವಿನಿಂದ ಕಷ್ಟ ಅನುಭವಿಸುತ್ತಿದ್ದು, ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‍ನಲ್ಲಿ ತಲಾ 5 ಸಾವಿರ ರೂ.ಗಳನ್ನು ಇವರಿಗೂ ನೀಡಬೇಕೆಂದು ಒತ್ತಾಯಿಸಿದರು.