ಮಡಿಕೇರಿ, ಮೇ 12: ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸ ಬೇಕಾಗುವುದರಿಂದ ತಾ. 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 2 ಗಂಟೆಯ ವರೆಗೆ 66/11 ಕೆ.ವಿ ಶನಿವಾರಸಂತೆ ವಿದ್ಯುತ್ ಉಪಕೇಂದ್ರ ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಲ್ಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಅಂಕನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.