ಕೂಡಿಗೆ, ಮೇ 12: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರ, ಹುಣಸೆಪಾರೆ, ಕುಂಬಾರ ಹಾಡಿಗಳಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಭೇಟಿ ನೀಡಿದರು. ಹಾಡಿಯ ಸಮಸ್ಯೆಗಳನ್ನು ಅರಿತು ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಪುನರ್ವಸತಿ ಕೇಂದ್ರದಲ್ಲಿ ರುವ ಅನೇಕ ಕುಟುಂಬದ ಮನೆಗಳಿಗೆ ವಿದ್ಯುತ್ ಬಿಲ್ ಹೆಚ್ಚು ಬಂದಿರುವ ಬಗ್ಗೆ ಪರಿಶೀಲಿಸಿ ಅದನ್ನು ಸರಿಪಡಿಸು ವಂತೆ ಒತ್ತಾಯ ಮಾಡಿದರು.
ಈ ಕೇಂದ್ರದಲ್ಲಿ ಇನ್ನೂ ಬಾಕಿ ಇರುವ 15 ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಅದಷ್ಟು ಬೇಗ ಕಾಮಗಾರಿಯನ್ನು ಮುಗಿಸುವಂತೆ ತಿಳಿಸಲಾಗುವುದು ಎಂದರು.