ನಾಪೆÇೀಕ್ಲು, ಮೇ 12: ಬೇತು ಗ್ರಾಮದ ಬೈಪಾಸ್ ರಸ್ತೆಯಲ್ಲಿ ಹೊಂಡ ಗುಂಡಿಗಳಾಗಿದ್ದು ನಡೆದಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನಾಪೋಕ್ಲು-ಮಡಿಕೇರಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯು ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೊಡಕಾಗಿದೆ. ಒಂದೆಡೆ ರಸ್ತೆಯಲ್ಲಿ ದೊಡ್ಡ ಹೊಂಡವಾಗಿದೆ. ನಾಪೋಕ್ಲು ವ್ಯಾಪ್ತಿಯಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಇಲ್ಲಿ ಮಳೆನೀರು ತುಂಬಿ ಚಾಲಕರು ಸಾಹಸದಿಂದ ಸಾಗಬೇಕಾಗಿದೆ.

ಇಲ್ಲಿರುವ ಹೊಂಡಗಳನ್ನು ಮುಚ್ಚಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.-ದುಗ್ಗಳ