ಮಡಿಕೇರಿ, ಮೇ 14: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತರೆ ದೇಶ, ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕಡ್ಡಾಯವಾಗಿ ಸಾಂಸ್ಥಿಕ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. ಇತರೆ ದೇಶ, ರಾಜ್ಯ, ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ವಿವರ ಕೆಳಕಂಡಂತಿದೆ.

ಇತರೆ ದೇಶದ ಜನರು- 00, ಇತರೆ ರಾಜ್ಯದ ಜನರು-355, ಇತರೆ ಜಿಲ್ಲೆಗಳ ಜನರು-6891, ಒಟ್ಟು ಜನರು-7246

ಪ್ರಯೋಗಾಲಯ ಪರೀಕ್ಷಾ ವರದಿ ವಿವರ

ಇಲ್ಲಿಯವರೆಗೆ ಒಟ್ಟು 1126 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಪಾಸಿಟಿವ್ ಪ್ರಕರಣಗಳು- 01 (ಪ್ರಸ್ತುತ ಗುಣಮುಖರಾಗಿದ್ದಾರೆ) ನೆಗೆಟಿವ್ ವರದಿ ಬಂದ ಪ್ರಕರಣಗಳು-990, ವರದಿ ನಿರೀಕ್ಷಿತ ಪ್ರಕರಣಗಳು-135. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 57 ಜನರು ದಾಖಲಿದ್ದಾರೆ.