ವೀರಾಜಪೇಟೆ, ಮೇ 14: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ವೀರಾಜಪೇಟೆ ಪಟ್ಟಣದಲ್ಲಿ ಆರೋಗ್ಯ ಸಿಬ್ಬಂದಿಗಳ ತಂಡ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಾಲೂಕು ತಹಶೀಲ್ದಾರ್ ಎಲ್.ಎಂ.ನಂದೀಶ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಪ್ರೌಢಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿ.ಎಲ್.ಓ ಗಳಿಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್‍ನ ಆರೋಗ್ಯ ತರಬೇತಿ ಕುರಿತು ತರಬೇತಿ ನೀಡಲಾಯಿತು.