ಮಡಿಕೇರಿ, ಮೇ 14: ಕರ್ನಾಟಕ ಸರ್ಕಾರದ ಆದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯವರ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿ ಮಾತ್ರ ರೂ. 5000 ಗಳನ್ನು ಡಿ.ಬಿ.ಟಿ. ಮೂಲಕ ಜಮಾ ಮಾಡಲಾಗುವುದು. ಈ ಸೌಲಭ್ಯ ಪಡೆಯಲು ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಎಲ್ಲಾ ನೋಂದಾಯಿತ ಕಾರ್ಮಿಕರು ಆಯಾ ತಾಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿರುವ ಬಗ್ಗೆ ಪಡೆದ ನೋಂದಾಯಿತ ಗುರುತಿನ ಚೀಟಿ ಪ್ರತಿ, ಆಧಾರ್ ಕಾರ್ಡ್‍ನ ಪ್ರತಿ, ಬ್ಯಾಂಕ್ ಅಕೌಂಟ್ ನಂಬರ್, ಐ.ಎಫ್.ಸಿ. ಕೋಡ್, ಹೆಸರು, ವಿಳಾಸ ಇರುವ ಬ್ಯಾಂಕ್ ಪಾಸ್ ಪುಸ್ತಕದ ಪುಟದ ಸ್ಪಷ್ಟವಾಗಿ ಕಾಣುವ ಜೆರಾಕ್ಸ್ ಪ್ರತಿ ಇವುಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಸಹಾಯಕ್ಕಾಗಿ ಮಡಿಕೇರಿ: 9448642111 (ಎಂ.ಎಂ. ಯತ್ನಟ್ಟಿ), 7760065658 (ಜರೀನಾ), 08272-225534. ವೀರಾಜಪೇಟೆ ಹಾಗೂ ಸೋಮವಾರಪೇಟೆ 9980344882 (ಕೆ.ಎನ್. ಲೀನಾ) ಸಂಪರ್ಕಿಸಬಹುದು.