ಮಡಿಕೇರಿ, ಮೇ 15: ಕೇಂದ್ರ ಸರ್ಕಾರದ ಸೂಚನೆಯಂತೆ ಕೋವಿಡ್ -19 ನಿಯಂತ್ರಣಕ್ಕೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಅಡಿಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಆಯುಷ್ ಇಲಾಖಾ ವತಿಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಚ್ಯವನಪ್ರಾಶ ಲೇಹ್ಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಅವರಿಗೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್.ರಾಮಚಂದ್ರ ಅವರು ಹಸ್ತಾಂತರಿಸಿದ್ದಾರೆ. ಎಲ್ಲಾ ಆಶಾ ಕಾರ್ಯಕರ್ತೆಯರು ಚ್ಯವನಪ್ರಾಶ್ ಲೇಹ್ಯವನ್ನು ಉಪಯೋಗಿಸಲು ಜಿಲ್ಲಾ ಆಯುಷ್ ಅಧಿಕಾರಿ ಕೋರಿದ್ದಾರೆ.