ಮಡಿಕೇರಿ, ಮೇ 15: ಜಿಲ್ಲೆಯಲ್ಲಿ ಕೋವಿಡ್-19ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇತರ ದೇಶ, ರಾಜ್ಯಗಳಿಂದ ಪಾಸ್ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಸಾಂಸ್ಥಿಕ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ.
ಇತರ ದೇಶ, ರಾಜ್ಯಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ವಿವರ ಕೆಳಕಂಡಂತಿದೆ. ಇತರ ದೇಶದ ಜನರು-00, ಇತರ ರಾಜ್ಯದ ಜನರು-388, ಇತರ ಜಿಲ್ಲೆಗಳ ಜನರು-7262, ಒಟ್ಟು ಜನರು-7650. ಇಲ್ಲಿಯವರೆಗೆ ಒಟ್ಟು 1245 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
ಪಾಸಿಟಿವ್ ಪ್ರಕರಣಗಳು- 01 (ಪ್ರಸ್ತುತ ಗುಣಮುಖರಾಗಿದ್ದಾರೆ). ನೆಗೆಟಿವ್ ವರದಿ ಬಂದ ಪ್ರಕರಣಗಳು-1034. ವರದಿ ನಿರೀಕ್ಷಿತ ಪ್ರಕರಣಗಳು-210. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ 35 ಜನರು ದಾಖಲಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.