ಸೋಮವಾರಪೇಟೆ, ಮೇ 15: ಜಿಲ್ಲಾ ವೀರಶೈವ ಜಂಗಮ ಅರ್ಚಕರ-ಪುರೋಹಿತರ ಸಂಘದ ಸಭೆಯು ಜಿಲ್ಲಾಧ್ಯಕ್ಷ ಮೋಹನ್‍ಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು.
ಲಾಕ್‍ಡೌನ್ ಆಗಿರುವ ಪ್ರಸ್ತುತತೆಯಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ದೇವಾಲಯಗಳು ಮುಚ್ಚಿರುವದರಿಂದ ಅರ್ಚಕರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಕೇಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಇದರೊಂದಿಗೆ ಎಲ್ಲೆಡೆ ಧಾರ್ಮಿಕ ಕಾರ್ಯಗಳು, ಶುಭ ಸಮಾರಂಭಗಳು ಸ್ಥಗಿತಗೊಂಡಿರುವದರಿಂದ ಪುರೋಹಿತ ವರ್ಗದ ಬದುಕು ಸಂಕಷ್ಟಕ್ಕೀಡಾಗಿದೆ. ಇದರಿಂದ ಹೊರಬರಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮನವಿ ಸಲ್ಲಿಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.
ತಾ. 15 ರಂದು ಕ್ಷೇತ್ರದ ಶಾಸಕರು, ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಗಮನ ಸೆಳೆಯಲು ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಸಂಘದ ಕಾರ್ಯದರ್ಶಿ ಸೋಮಶೇಖರ್, ಖಜಾಂಚಿ ಬಸವಕುಮಾರ ಶಾಸ್ತ್ರೀ ಸೇರಿದಂತೆ ಸದಸ್ಯರುಗಳು ಭಾಗವಹಿಸಿದ್ದರು.