ಮಡಿಕೇರಿ, ಮೇ 15: ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ಹಾಗೂ ವಿಧಾನಸಭಾ ಮಾಜಿ ಅಧ್ಯಕ್ಷ, ಹಾಲಿ ವೀರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಕೆ.ಜಿ. ಬೋಪಯ್ಯ ಅವರುಗಳ ಬಗ್ಗೆ ಹಾಗೂ ಗೌಡ ಜನಾಂಗ, ಸಂಸ್ಕøತಿ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಗೌಡ ಜನಾಂಗ ಹಾಗೂ ಜನಪ್ರತಿನಿಧಿಗಳ ಬಗ್ಗೆ ಅವಹೇಳನ ಕಾರಿಯಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಕೊಡಗು ಗೌಡ ಸಾಂಸ್ಕøತಿಕ ಅಕಾಡೆಮಿ ವತಿಯಿಂದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ಜನಾಂಗವನ್ನು ನಿಂದಿಸುವದ ರೊಂದಿಗೆ ಕೋಮುಗಲಭೆಗೆ ಪ್ರಚೋದಿಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಸಾಮಾಜಿಕ ಜಾಲತಾಣ ದಲ್ಲಿ ಹಾಕಿರುವ ಪೋಸ್ಟ್‍ಗಳನ್ನು ತೆಗೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಮೂವೇರ ರಾಯ್ ಪೊನ್ನಣ್ಣ ಎಂಬಾತ ಕೆ.ಜಿ. ಬೋಪಯ್ಯ ಹಾಗೂ ಗೌಡ ಜನಾಂಗವನ್ನು ನಿಂದಿಸಿದ್ದರೆ, ಮುಕ್ಕಾಟಿರ ಅಯ್ಯಪ್ಪ ಡಿ.ವಿ. ಸದಾನಂದ ಗೌಡರನ್ನು ಹಾಗೂ ಜನಾಂಗವನ್ನು ನಿಂದಿಸಿದ್ದು, ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳು ವಂತೆ ದೂರಿನಲ್ಲಿ ತಿಳಿಸಲಾಗಿದೆ.