ಮಡಿಕೇರಿ, ಮೇ 15 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇದ್ದ 79 ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ ಮತ್ತು ಮಹಿಳೆ) ಹಾಗೂ 54 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಯ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೊಡಗು ಜಿಲ್ಲಾ ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ ಸಮಿತಿಯು ತಾ. 15 ರಂದು ತಯಾರಿಸಿ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಪ್ರಥಮ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆ ಗೊಂಡ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲ ನೆಗಾಗಿ ನಿಗದಿತ ದಿನಾಂಕದಂದು ಹಾಜರಾಗಲು ಕರೆ ಪತ್ರವÀನ್ನು ಅಂಚೆ ಮೂಲಕ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ ಅವರು ತಿಳಿಸಿದ್ದಾರೆ.