ಬೆಂಗಳೂರು, ಮೇ 15: ಪ್ರಾಕೃತಿಕ ವಿಕೋಪ ಗಳಲ್ಲಿ ಮೃತಪಟ್ಟ ಕುರಿ, ಮೇಕೆ, ಜಾನುವಾರುಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ಮುಂದುವರೆಸಲಾಗುವುದು. ಮೆಕ್ಕೆಜೋಳ ಬೆಳೆದ ರಾಜ್ಯದ 10 ಲಕ್ಷ ರೈತರಿಗೆ ತಲಾ ಐದು ಸಾವಿರ ರೂಪಾಯಿಯಂತೆ ಪರಿಹಾರ ನೀಡಲಾಗು ವುದು. ಈ ಯೋಜನೆಗೆ 500 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್-19 ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 42 ಸಾವಿರ 500 ಆಶಾ ಕಾರ್ಯಕರ್ತೆ ಯರ ವಿಶೇಷ ಸೇವೆಯನ್ನು ಗುರುತಿಸಿ ತಲಾ 3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇದಕ್ಕೆ 12 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈ ಮೊತ್ತ ವನ್ನು ಸಹಕಾರ ಸಂಘ ಸಂಸ್ಥೆಗಳಿಂದ ಕ್ರೋಢೀಕರಿಸಿ ಸಹಕಾರ ಇಲಾಖೆಯ ವತಿಯಿಂದ ನೀಡಲಾಗುತ್ತದೆ ಎಂದರು.