ಸೋಮವಾರಪೇಟೆ, ಮೇ 17: ಕುಡಿಯುವ ನೀರಿನ ವಿಚಾರದಲ್ಲಿ ತಗಾದೆ ತೆಗೆದು ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಸಮೀಪದ ತಾಕೇರಿ ಗ್ರಾಮದ ಪೂಣಚ್ಚ ಎಂಬವರ ಮೇಲೆ ಸಂಬಂಧಿಕನಾದ ನಿತಿನ್ ಎಂಬಾತ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಹಲ್ಲೆಯಿಂದ ಪೂಣಚ್ಚ ಅವರ ಕೈ, ಮೂಗು, ತೊಡೆಯ ಭಾಗಕ್ಕೆ ಪೆಟ್ಟಾಗಿದ್ದು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.