ಸಚಿವ ಸುರೇಶ್ ಕುಮಾರ್ ಬೆಂಗಳೂರು, ಮೇ 16: ತರಾತುರಿಯಲ್ಲಿ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲಿ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಅಧಿಕೃತವಲ್ಲ. ಶಾಲೆಗಳನ್ನು ತೆರೆಯುವ ವಿಷಯದಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಲ್.ಕೆ.ಜಿ, ಯುಕೆಜಿ ಮಕ್ಕಳಿಗೆ ಆನ್‍ಲೈನ್ ಕ್ಲಾಸ್ ನಡೆಸುತ್ತಿರುವ ವಿಷಯದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಎಲ್.ಕೆ.ಜಿ, ಯು.ಕೆ.ಜಿ ಮಕ್ಕಳಿಗೂ ಆನ್‍ಲೈನ್ ಕಲಿಕೆ ಸರಿಯಲ್ಲ. ಇದು ಹಾಸ್ಯಾಸ್ಪದ ಸಂಗತಿ. ಇದರ ಬಗ್ಗೆ ಅಧ್ಯಯನ ಮಾಡುವಂತೆ ಇಲಾಖೆ ಆಯುಕ್ತರಿಗೆ ಸೂಚಿಸಿದ್ದೇನೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನೂ ನಾವು ಮಾಡುತ್ತೇವೆ. ಇಂತಹ ಶಿಕ್ಷಣ ಸಂಸ್ಥಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.