ಕೂಡಿಗೆ, ಮೇ 16: ಕೊಡಗಿನ ಗಡಿ ಭಾಗದ ಶಿರಂಗಾಲದಲ್ಲಿ ನೂತನ ತಪಾಸಣೆಯ ಕಟ್ಟಡ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿದ್ದಾರೆ.

ಶಾಸಕರು ಶಿರಂಗಾಲ ಗಡಿ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿನ ಹಳೆಯ ತಪಾಸಣಾ ಕೇಂದ್ರವು ಕಳೆದ ವಾರ ಮಳೆ ಗಾಳಿಗೆ ಹಾನಿಗೊಂಡಿರು ವುದನ್ನು ಗಮನಿಸಿದರು. ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆಯವರಿಂದ ಮಾಹಿತಿ ಪಡೆದು, ನಂತರ ಶಾಶ್ವತ, ಸುಸಜ್ಜಿತವಾದ ತಪಾಸಣಾ ಕೇಂದ್ರದ ಕಟ್ಟಡವನ್ನು ನಿರ್ಮಾಣ ಮಾಡಲು ಪ್ರಸ್ತಾವನೆಯನ್ನು ಕಳುಹಿಸುವಂತೆ ಪೊಲೀಸ್ ಅಧಿಕಾರಿಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡಲಾಗುವುದು. ಅಲ್ಲದೆ ಇಲ್ಲಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಒದಗಿಸುವುದಾಗಿಯೂ ಭರವಸೆ ನೀಡಿದರು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀನಿವಾಸ, ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಜಯಣ್ಣ, ಕುಶಾಲನಗರ ಡಿವೈಎಸ್‍ಪಿ ಶೈಲೇಂದ್ರ, ಪೊಲೀಸ್ ವೃತ ನಿರೀಕ್ಷಕ ಮಹೇಶ್ ಕುಮಾರ್ ಸೇರಿದಂತೆ ಸ್ಥಳೀಯ ವಿವಿಧ ಘಟಕ ಪದಾಧಿಕಾರಿಗಳು ಇದ್ದರು.